ಬೆಂಗಳೂರು : ಹಿಂದಿನ ಕಾಲದಲ್ಲಿ ನಮ್ಮ ಮನೆಯಲ್ಲಿ ಅಮ್ಮ, ಅಕ್ಕ ,ತಂಗಿ ಹೀಗೆ ಎಲ್ಲರೂ ತಪ್ಪದೆ ನಮ್ಮ ಸಂಪ್ರದಾಯದಂತೆ ಕೈಗಳಿಗೆ ಬಳೆಗಳನ್ನು ಹಾಕಿಕೊಳ್ಳುತ್ತಿದ್ದರು. ಆದರೆ, ಈಗ ಕಾಲ ಸಂಪೂರ್ಣ ಬದಲಾಗಿದೆ. ಯಾವುದಾದರೂ ಕಾರ್ಯಕ್ರಮಗಳಿಗೆ ಹೋಗುವಾಗ ಅಥವಾ ವಿಶೇಷ ಸಂದರ್ಭಗಳಲ್ಲಿ ಮಾತ್ರ ಕೈಗಳಿಗೆ ಬಳೆಗಳನ್ನು ಹಾಕಿಕೊಳ್ಳುತ್ತಾರೆ.