ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಂಸಾರದಲ್ಲಿ ನೆಮ್ಮದಿ ನೆಲೆಸಲಿದೆ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸುವ ವಿವಾಹ ಪ್ರಸ್ತಾಪಗಳು ಬರುವುದು. ಉದ್ಯೋಗದಲ್ಲಿ ಕಾರ್ಯದೊತ್ತಡವಿರುವುದು. ಆದರೆ ಕಾರ್ಯಸಾಧನೆಗೆ ತೊಂದರೆಯಿಲ್ಲ.ವೃಷಭ: ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ದೊರಕಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳು ಬಂದು ಸಂತಸ ತರುವರು. ಹೊಸ ವ್ಯವಹಾರ ಮಾಡಲು ಸೂಕ್ತ ದಿನ.ಮಿಥುನ: ಅವಿವಾಹಿತರ ಮಕ್ಕಳ ಮದುವೆ ಬಗ್ಗೆ ಯೋಚನೆ ಮಾಡುವಿರಿ.