ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಹುದ್ದೆ ಸಿಗುವುದಷ್ಟೇ. ಉತ್ತಮ ದಿನಗಳಿಗಾಗಿ ಕಾಯಬೇಕಾಗುತ್ತದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮಾಡಿಕೊಳ್ಳಬೇಡಿ. ಖರ್ಚು ವೆಚ್ಚದ ಬಗ್ಗೆ ಹಿಡಿತ ಅಗತ್ಯ.ವೃಷಭ: ಉದ್ಯೋಗದಲ್ಲಿ ನಿರೀಕ್ಷಿತ ಮುನ್ನಡೆ ಸಿಕ್ಕಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗುತ್ತದೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸುವಿರಿ.ಮಿಥುನ: ಆರೋಗ್ಯದಲ್ಲಿ ಸಮಸ್ಯೆ ಕಂಡುಬರುವುದು. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಹಣಕಾಸಿನ