ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆಯಿರುತ್ತದೆ. ಆದರೆ ಸಹೋದ್ಯೋಗಿಗಳಿಂದ ಕಿರಿ ಕಿರಿ ತಪ್ಪದು. ದೂರ ಸಂಚಾರ ಮಾಡುವುದರಿಂದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಅಗತ್ಯವಿದೆ.ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುವುದು. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.ಮಿಥುನ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ಮನಸ್ಸಿಗೆ ಬೇಸರವಾಗುವುದು. ಆದರೆ ನಿರಾಶೆ ಬೇಡ. ಮಿತ್ರರಿಂದ ಸಹಕಾರ ದೊರೆಯುವುದು.