ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಯಲ್ಲಿ ಬಂಧುಮಿತ್ರರ ಆಗಮನ ಮನಸ್ಸಿಗೆ ಮುದ ನೀಡಲಿದೆ. ಹಾಗಿದ್ದರೂ ಹಿರಿಯರ ಅಸಮಾಧಾನಕ್ಕೆ ಕಾರಣವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಮನೆಯಲ್ಲಿ ಶುಭ ಮಂಗಲಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಕೊಂಚ ಹಿನ್ನಡೆಯಾದೀತು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬಂಧುಮಿತ್ರರಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರವಹಿಸಿ.ಮಿಥುನ: ಶೀತ ಸಂಬಂಧೀ ಸಮಸ್ಯೆಗಳು ಬರಬಹುದು. ಆರೋಗ್ಯದ