Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಮಂಗಳವಾರ, 11 ಜೂನ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿರೀಕ್ಷಿತ ರೀತಿಯಲ್ಲಿಯೇ ಹೊಸ ವ್ಯವಹಾರಗಳು ನಡೆಯಲಿವೆ. ಚಿಂತೆ ಬೇಡ. ಆದರೆ ತಾತ್ಕಾಲಿಕ ಉದ್ಯೋಗಗಿಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣವಿರಲಿ.
 
ವೃಷಭ: ಇತರರಿಗೆ ಸಹಾಯ ಮಾಡುವ ನಿಮ್ಮ ಗುಣ ನಿಮಗೇ ತೊಂದರೆ ತಂದಿಟ್ಟೀತು. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ಹಾಸಿಗೆ ಇದ್ದಷ್ಟೇ ಕಾಲು ಚಾಚುವುದು ಒಳಿತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಮಿಥುನ: ಯಾಕೋ ನಿಮ್ಮ ಗ್ರಹ ಫಲಗಳು ಇಂದು ನಿಮಗೇ ಉಲ್ಟಾ  ಹೊಡೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲವಿಲ್ಲದೇ ಬೇಸರವಾದೀತು. ಮನೆಯಲ್ಲಿಯೂ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ತಾಳ್ಮೆಯಿಂದಿರಿ.
 
ಕರ್ಕಟಕ: ಆರೋಗ್ಯ ಭಾಗ್ಯದಲ್ಲಿ ಸುಧಾರಣೆಯಾಗಲಿದೆ. ಹಿರಿಯರ ತೀರ್ಥ ಯಾತ್ರೆಗಳಿಗೆ ವ್ಯವಸ್ಥೆ ಮಾಡುವಿರಿ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.
 
ಸಿಂಹ: ಆಸ್ತಿ ವಿಚಾರದಲ್ಲಿ ದಾಯಾದಿಗಳಿಂದ ಕಿರಿಕಿರಿಯಾಗಬಹುದು. ಆದರೆ ಇಷ್ಟಮಿತ್ರರ ಭೇಟಿ, ಭೋಜನ ಮನಸ್ಸಿಗೆ ನೆಮ್ಮದಿ ಕೊಡುವುದು. ನಿಮ್ಮ ಕ್ರಿಯಾಶೀಲತೆಗೆ ಕೆಲಸ ಕೊಡಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
 
ಕನ್ಯಾ: ಕೈಗೊಂಡ ಕಾರ್ಯಗಳಲ್ಲಿ ಪ್ರತಿಕೂಲವಾದ ಫಲಿತಾಂಶಗಳು ಬರಬಹುದು. ನಿಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವವರು ಇರುತ್ತಾರೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು. ಎಚ್ಚರಿಕೆ ಅಗತ್ಯ.
 
ತುಲಾ: ರಾಜಕೀಯ ಕ್ಷೇತ್ರದಲ್ಲಿರುವವರ ಸ್ಥಾನ ಮಾನ ವೃದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆದರೆ ನಿರೀಕ್ಷಿಸಿದಷ್ಟು ಆದಾಯ ಬರದೇ ಚಿಂತೆಯಾಗುವುದು. ದೇವತಾ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ಸರಕಾರಿ ಅಧಿಕಾರಿಗಳಿಗೆ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲು ಕೆಲವು ಸಮಯ ಕಾಯಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಧನು: ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕಾರ್ಯಕ್ಷೇತ್ರದಲ್ಲಿ ಜಯ, ಅಭಿವೃದ್ಧಿ ಗೋಚರಕ್ಕೆ ಬರುವುದು. ಕಿರು ಸಂಚಾರ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ವೈವಾಹಿಕ ಪ್ರಸ್ತಾಪಗಳು ಬರುವುದು.
 
ಮಕರ: ವೃತ್ತಿರಂಗದಲ್ಲಿ ಚಾಡಿಕೋರರಿಂದ ದೂರವಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸದ ವಾರ್ತೆಯಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದಾಯಕ್ಕೇನೂ ಕೊರತೆಯಿರದು, ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ.
 
ಕುಂಭ: ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ಕೆಡುಕು ಮಾತನಾಡುವವರು ಸುತ್ತಲೂ ಇರುತ್ತಾರೆ. ತಲೆಕೆಡಿಸಿಕೊಳ್ಳಬೇಡಿ. ಸಾಧು ಸಂತರ ಭೇಟಿ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.
 
ಮೀನ: ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಮುಂದಾಗಲು ಸಕಾಲ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಸಂಗಾತಿಯ ಇಷ್ಟ ಕಷ್ಟಗಳಿಗೆ ಬೆಲೆಕೊಡಬೇಕಾಗುತ್ತದೆ.
ಇದರಲ್ಲಿ ಇನ್ನಷ್ಟು ಓದಿ :