ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಬಿಡುವಿಲ್ಲದೇ ಕೆಲಸಗಳಿರಲಿವೆ. ಆದರೆ ಸಂಗಾತಿಯಿಂದ ಸಹಕಾರ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಹಲವು ಅಡೆತಡೆಗಳು ತೋರಿಬರಲಿವೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆರ್ಥಿಕವಾಗಿ ಇದುವರೆಗೆ ಇದ್ದ ಅಡಚಣೆಗಳು ನಿವಾರಣೆಯಾಗಿ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ನಿಮ್ಮ ಕೆಲಸಕ್ಕೆ ದೇವರ ಅನುಗ್ರಹವಿರಲಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಮಾಡಬೇಕಾಗುತ್ತದೆ.