Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಸೋಮವಾರ, 1 ಜುಲೈ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಅನಗತ್ಯವಾಗಿ ಮಾನಸಿಕ ನೆಮ್ಮದಿಯನ್ನು ಹಾಳುಮಾಡಿಕೊಳ್ಳುವಿರಿ. ಇದರಿಂದ ದೈಹಿಕ ಆರೋಗ್ಯವೂ ಹಾಳಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಎಂದಿನಂತೆ ಕಾರ್ಯದೊತ್ತಡವಿರುವುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು.
 
ವೃಷಭ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಮನಸ್ಸಿಗೆ ಸಂತಸ ನೀಡುವುದು.
 
ಮಿಥುನ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ತಲೆದೋರಲಿವೆ. ಆರ್ಥಿಕವಾಗಿ ಧನಾಗಮನವಾದಷ್ಟೇ ಖರ್ಚೂ ಇರಲಿದೆ. ಸ್ವ ಉದ್ಯೋಗಿಗಳಿಗೆ ಲಾಭವಾಗುವುದು. ದೇವತಾ ಪ್ರಾರ್ಥನೆ ಮಾಡಿರಿ.
 
ಕರ್ಕಟಕ: ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚುವೆಚ್ಚಗಳು ತಲೆದೋರಿ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.
 
ಸಿಂಹ: ಸಾಲ ಮರುಪಾವತಿ ಚಿಂತೆಗೆ ಕಾರಣವಾಗುವುದು. ಇನ್ನೊಬ್ಬರ ಕೆಲಸಗಳಿಗೆ ತಲೆತೂರಿಸಲು ಹೋದರೆ ಅನಗತ್ಯ ತೊಂದರೆಗೆ ಸಿಲುಕಿಕೊಳ್ಳಬೇಕಾಗಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.
 
 
ಕನ್ಯಾ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ ಸಿಗುವುದು. ಸಾಲ ಪಾವತಿ ಚಿಂತೆಯಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ.
 
ತುಲಾ: ಕಚೇರಿ ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದೇ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ವೃಶ್ಚಿಕ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಲಿವೆ. ನಿರುದ್ಯೋಗಿಗಳು ಉದ್ಯೋಗ ಅರಸಲು ದೂರ ಸಂಚಾರ ಮಾಡಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಸಿಗಲಿದೆ.
 
ಧನು: ಅನಗತ್ಯವಾಗಿ ಮಕ್ಕಳ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ನಿಷ್ಠುರಕ್ಕೆ ಕಾರಣರಾಗುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರುವುದು.
 
ಮಕರ: ಕಷ್ಟದ ಸಮಯದಲ್ಲಿ ಸನ್ಮಿತ್ರರ ನೆರವು ಸಿಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.
 
ಕುಂಭ: ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ಆರ್ಥಿಕವಾಗಿ ಖರ್ಚಿನ ಬಗ್ಗೆ ಮಿತಿಯಿರಲಿ.
 
ಮೀನ: ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ಸಂಬಂಧಗಳು ಬರುವುದಾದರೂ ಕೊನೆಯ ಕ್ಷಣದಲ್ಲಿ ಕೈ ತಪ್ಪಬಹುದು. ಕುಲದೇವರ ಪ್ರಾರ್ಥನೆ ಮಾಡಿ. ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗುವುದು. ಆರೋಗ್ಯದಲ್ಲಿ ಸುಧಾರಣೆ.
ಇದರಲ್ಲಿ ಇನ್ನಷ್ಟು ಓದಿ :