ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ಅತೀವ ಒತ್ತಡವಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿರುತ್ತವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರುವುದು. ದೈವಾನುಗ್ರಹ ನಿಮ್ಮ ಮೇಲಿದ್ದು, ಆರ್ಥಿಕವಾಗಿಯೂ ಚೇತರಿಕೆ ಕಂಡುಬರುವುದು.ಮಿಥುನ: ಹೊಸ ಕೆಲಸಗಳಿಗೆ ಕೈ ಹಾಕಿದರೆ ಜಯ ನಿಮ್ಮದಾಗುವುದು. ಆದರೆ ಕಠಿಣ ಪ್ರಯತ್ನ ಬಲ ಅಗತ್ಯ.