ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ಅನಿರೀಕ್ಷಿತವಾಗಿ ಧನಾಗಮನವಾಗುವುದು. ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ.ವೃಷಭ: ಸಂಗಾತಿಯೊಂದಿಗೆ ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರುವುದು. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ವ್ಯಾಪಾರ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.ಕರ್ಕಟಕ: ಇಷ್ಟ