ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕ ವಿಚಾರವಾಗಿ ನಿರ್ಧಾರ ಕೈಗೊಳ್ಳುವಾಗ ಸಂದಿಗ್ಧತೆ ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕ ಆದಾಯ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಆರೋಗ್ಯ ಭಾಗ್ಯ ಕೈಕೊಡುವುದು.ವೃಷಭ: ಶ್ರಮವಿಲ್ಲದೇ ಕಾರ್ಯಸಾಧನೆಯಾಗದು. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಹಿರಿಯರ ಹಿತೋಪದೇಶಗಳಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ತಪ್ಪುಗಳಾಗಬಹುದು. ಎಚ್ಚರಿಕೆಯಿಂದಿರಿ.ಮಿಥುನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗಬಹುದು. ಆದರೆ ಕಲೆ, ಸಾಹಿತ್ಯದಲ್ಲಿ ಆಸಕ್ತಿಯುಳ್ಳವರಿಗೆ ಉತ್ತಮ ಸ್ಥಾನ ಮಾನ ಸಿಗಲಿದೆ.