Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 24 ಜುಲೈ 2019 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಮಕ್ಕಳ ಬಗ್ಗೆ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ.
 
ವೃಷಭ: ಆರ್ಥಿಕವಾಗಿ ಮುನ್ನಡೆಯಿದ್ದು, ಅರ್ಧಕ್ಕೆ ನಿಂತ ಯೋಜನೆಗಳನ್ನು ಪೂರ್ತಿ ಮಾಡುವಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.
 
ಮಿಥುನ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಇದ್ದರೂ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.  ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಸಂಚಾರದಿಂದ ಕಾರ್ಯ ಸಿದ್ಧಿಯಾಗುವುದು.
 
ಕರ್ಕಟಕ: ಸ್ವ ಉದ್ಯೋಗಿಗಳಿಗೆ ಸಂಗಾತಿಯಿಂದ ಸಹಾಯ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಕಿರಿ ಕಿರಿ. ದೇವತಾ ಪ್ರಾರ್ಥನೆ ಮಾಡಿ.
 
ಸಿಂಹ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಆಪ್ತರಿಂದ ಸಹಾಯ ಸಿಗಲಿದೆ. ವಾಹನ ಖರೀದಿ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಹಿನ್ನಡೆಯಾದೀತು.
 
ಕನ್ಯಾ: ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಕಾರ್ಮಿಕ ವರ್ಗದವರಿಗೆ ಶುಭ ಫಲ ನಿರೀಕ್ಷಿಸಬಹುದು. ಕೃಷಿಕರಿಗೆ ಸಂತಸದ ವಾರ್ತೆಯಿದೆ.
 
ತುಲಾ: ರಾಜಕೀಯ ರಂಗದಲ್ಲಿರುವವರು ಅವಮಾನದ ಭೀತಿಗೆ ಸಿಲುಕಲಿದ್ದಾರೆ. ಋಣಾತ್ಮಕ ಚಿಂತನೆಗಳಿಂದ ಆಲಸ್ಯತನ ತೋರಿಬರುವುದು. ವಿವಾಹ ಪ್ರಸ್ತಾಪಗಳು ಕೂಡಿಬರಲಿವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
ವೃಶ್ಚಿಕ: ದೇಹಾರೋಗ್ಯ ಕೈಕೊಟ್ಟು ಆಸ್ಪತ್ರೆಗೆ ಅಲೆದಾಡಬೇಕಾದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ.
 
ಧನು: ಸಾಂಸಾರಿಕವಾಗಿ ನೆಮ್ಮದಿ ವಾತಾವರಣವಿರಲಿದೆ. ಬಂಧು ಮಿತ್ರರ ಭೇಟಿ ಮನಸ್ಸಿಗೆ ಖುಷಿ ನೀಡುವುದು. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಸಮಾಧಾನಕರ ದಿನ.
 
ಮಕರ: ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗಲಿದೆ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡುವಿರಿ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಸರಕಾರಿ ಕೆಲಸಗಳಲ್ಲಿ ಜಯ. ವಾಹನ ಖರೀದಿ ಯೋಗವಿದೆ.
 
ಕುಂಭ: ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗುವುದು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಾನಸಿಕವಾಗಿ ಒಂದು ರೀತಿಯ ಬೇಸರ ಕಾಡುವುದು. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಕಿರು ಸಂಚಾರ ಮಾಡಬೇಕಾಗುತ್ತದೆ.
 
ಮೀನ: ದೈವಾನುಕೂಲದಿಂದ ಇಂದು ನೀವು ಕೈ ಹಿಡಿದ ಕೆಲಸಗಳಲ್ಲಿ ಜಯ ಸಾಧಿಸುವಿರಿ. ವೃತ್ತಿರಂಗದಲ್ಲಿ ಅಭಿವೃದ್ಧಿ ಪೂರಕ ವಾತಾವರಣವಿರಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ಮೂಡದಂತೆ ಎಚ್ಚರಿಕೆ ವಹಿಸಬೇಕು.
ಇದರಲ್ಲಿ ಇನ್ನಷ್ಟು ಓದಿ :