ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಸಂಭವವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಆದಾಯ ಉತ್ತಮವಾಗಿರುತ್ತದೆ. ಆದರೆ ವಂಚನೆಗೊಳಗಾಗುವ ಭೀತಿಯಿದೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗ ಲಾಭ.ವೃಷಭ: ಇದುವರೆಗೆ ಇದ್ದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ವಿದ್ಯಾರ್ಥಿಗಳಿಗೆ ಚಿತ್ತಚಾಂಚಲ್ಯ ಕಾಡಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಾಹನ ಚಾಲಕರು ಚಾಲನೆಯಲ್ಲಿ ಅತೀವ ಎಚ್ಚರಿಕೆ ವಹಿಸಬೇಕು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಂಬಿಕೊಂಡವರಿಂದಲೇ ವಂಚನೆಗೊಳಗಾಗುವ