ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೆಲಸ ಕಾರ್ಯಗಳಿಗಾಗಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ದೃಢ ನಿರ್ಧಾರದಿಂದ ಮುನ್ನಡೆಯಬೇಕಾದ ದಿನವಿದು. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆ.ವೃಷಭ: ಸಾಂಸಾರಿಕವಾಗಿ ತಾಳ್ಮೆ ಕಳೆದುಕೊಳ್ಳುವಂತಹ ಪ್ರಸಂಗ ಎದುರಾಗಬಹುದು. ದುಡುಕಿನ ಮಾತನಾಡಬೇಡಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆ ಬರದು. ಆದರೆ ಮಿತ್ರರ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ. ಮಾನಸಿಕವಾಗಿ ತಾಳ್ಮೆ ಮುಖ್ಯ.ಮಿಥುನ: ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆಯಿಂದ ನಡೆದುಕೊಳ್ಳುವುದು