ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚಗಳಿರಲಿವೆ. ಗೃಹ ಸಂಬಂಧೀ ಕೆಲಸಗಳನ್ನು ಮಾಡಬೇಕಾಗುತ್ತದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರುವುದು. ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಭಿವೃದ್ಧಿ ಕಂಡುಬರುವುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.ಮಿಥುನ: ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆಯಿಂದಿರುವುದು