ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಭಾಯಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಓಡಾಟ ಹೆಚ್ಚಲಿದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ದೇಹಾರೋಗ್ಯ ಹದತಪ್ಪದಂತೆ ಎಚ್ಚರವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ವೃಷಭ: ಅವಿವಾಹಿತರು ಸಂಗಾತಿ ಆಯ್ಕೆ ಮಾಡಿಕೊಳ್ಳುವ ಸಂದರ್ಭ ಬಂದಾಗ ಎಚ್ಚರಿಕೆಯಿಂದ ಮಾಡಬೇಕು. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಎದುರಾಗಬಹುದು. ಹಿರಿಯರ ಮಾತಿಗೆ ಕಿವಿಗೊಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ಮಿಥುನ: ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ