ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಮಕ್ಕಳ ವಿಚಾರದಲ್ಲಿ ಸಂತಸವಿರಲಿದೆ. ಆದರೆ ಸಂಗಾತಿಯೊಡನೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ನಿರೀಕ್ಷಿತ ರೀತಿಯಲ್ಲಿ ಕೆಲಸ ಸಾಗಿ ಸಂತಸವಾಗುವುದು. ಇಂಜಿನಿಯರಿಂಗ್ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರುವುದು.ಮಿಥುನ: ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮಕ್ಕಳ ಭವಿಷ್ಯದ