ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರುವುದು. ದೂರ ಪ್ರಯಾಣದಿಂದಾಗಿ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಕೂಡಿಟ್ಟ ಹಣ ಕಾಪಾಡಿಕೊಳ್ಳುವ ಚಿಂತೆ ಕಾಡಬಹುದು. ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು. ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಮಿತ್ರರ