ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆಗಾಗ ಸಂಗಾತಿಯ ಜತೆಗೆ ಮನಸ್ತಾಪವಾಗಿ ಮಾನಸಿಕವಾಗಿ ಚಿಂತೆಯಾಗಬಹುದು. ಯಾವುದೇ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದಲೇ ಎದುರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಪಡೆಯಲಿದ್ದೀರಿ. ಬಂಧು ಮಿತ್ರರ ಸಹಕಾರ ದೊರೆಯಲಿದೆ.ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಇದರಿಂದಾಗಿ ನೀವು ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಹೊಸ ವಾಹನ ಖರೀದಿ ಯೋಗವಿದೆ. ದಿನದಂತ್ಯಕ್ಕೆ ಶುಭ