ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ತೊಂದರೆಗಳಿಂದ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಒಂದು ರೀತಿಯಲ್ಲಿ ಮಾನಸಿಕವಾಗಿ ಋಣಾತ್ಮಕ ಯೋಚನೆಗಳು ಬರಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ಸುಧಾರಣೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆಯಿರಲಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದಾಂಪತ್ಯದಲ್ಲಿ ಸಂತೋಷವಿರುವುದು.ಮಿಥುನ: ವೃತ್ತಿರಂಗದಲ್ಲಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಇದರಿಂದಾಗಿ ಮನದಿಂಗಿತಗಳನ್ನು ನೆರವೇರಿಸಿಕೊಳ್ಳುವಿರಿ.