ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸದಾಗಿ ಕೆಲವು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೇವರ ಪ್ರಾರ್ಥನೆ ಮಾಡಿ.ವೃಷಭ: ಸಂಗಾತಿಯೊಂದಿಗೆ ಮಕ್ಕಳ ಭವಿಷ್ಯದ ವಿಚಾರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುವಿರಿ. ವೃತ್ತಿರಂಗದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ನಡೆಸಬೇಕಾಗುತ್ತದೆ.ಮಿಥುನ: