ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಪ್ರಾಪ್ತಿಗಾಗಿ ಪ್ರಭಾವೀ ವ್ಯಕ್ತಿಗಳ ಸಹಾಯ ಪಡೆಯಲಿದ್ದೀರಿ. ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರಲಿದೆ. ಹಾಗಿದ್ದರೂ ಒಂದಾದ ಮೇಲೊಂದರಂತೆ ಸಮಸ್ಯೆಗಳು ಬಂದು ಬೇಸರವಾಗಲಿದೆ. ಆತ್ಮಸ್ಥೈರ್ಯದಿಂದ ಎದುರಿಸಬೇಕಿದೆ.ವೃಷಭ: ವಿದ್ಯಾರ್ಥಿಗಳು ಪೋಷಕರಿಗೆ ಖುಷಿಯಾಗುವಂತಹ ಸಾಧನೆ ಮಾಡಲಿದ್ದಾರೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗಬಹುದು. ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಬೆಲೆ ಬಾಳುವ ವಸ್ತುಗಳನ್ನು ಜೋಪಾನ ಮಾಡಿಕೊಳ್ಳಿ.ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ