ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಕಾಗುತ್ತದೆ. ಅಂದುಕೊಂಡ ಕಾರ್ಯ ಸಾಧನೆ ಮಾಡಲು ಅಡೆತಡೆಗಳು ತೋರಿಬರಲಿವೆ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಸೂಕ್ತ ಯೋಜನೆ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಹಳೆಯ ಮಿತ್ರರ ಅನಿರೀಕ್ಷಿತ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಪ್ರೀತಿ ಪಾತ್ರರ ಭಾವನೆಗಳಿಗೆ ಬೆಲೆಕೊಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ಉದ್ಯೋಗ ರಂಗದಲ್ಲಿ ಕಿರಿ ಕಿರಿಯಿಂದಾಗಿ ಉದ್ಯೋಗ