ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸರಕಾರಿ ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಭೀತಿಯಿದೆ. ದೇಹಾರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಆಗಾಗ ಓಡಾಟ ನಡೆಸಬೇಕಾಗಬಹುದು.ವೃಷಭ: ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಗೃಹನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.ಮಿಥುನ: ನ್ಯಾಯಾಲಯದ ಕಲಾಪದಲ್ಲಿ