ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಉತ್ತಮ ಸಂಬಂಧಗಳನ್ನು ಯೋಚಿಸಿ ಆಯ್ಕೆ ಮಾಡಬೇಕಾಗುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಆದರೂ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಅನಗತ್ಯ ಚಿಂತೆ ಬೇಡ.ವೃಷಭ: ನಿರುದ್ಯೋಗಿಗಳು ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆಯಲ್ಲಿ ಸಮಾಧಾನಕರ ವಾತಾವರಣವಿರುವುದು. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ.ಮಿಥುನ: ಯಾವುದೇ ವಿಚಾರದಲ್ಲೂ ಅನಗತ್ಯ