ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಬಳಿ ಇರುವ ಸೌಕರ್ಯದಲ್ಲೇ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಸಾಂಸಾರಿಕವಾಗಿ ತಾಳ್ಮೆಯಿಂದಿದ್ದರೆ ಸಮಾಧಾನಕರ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ಉತ್ಸಾಹಕ್ಕೆ ಭಂಗ ತರುವ ಘಟನೆಗಳು ನಡೆಯಬಹುದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ