ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಹಣಕಾಸಿನ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಕುಂಠಿತವಾಗಬಹುದು. ರಾಜಕೀಯ ವರ್ಗದವರಿಗೆ ಹೊಸ ಸವಾಲುಗಳು ಎದುರಾಗಲಿವೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೈಯಕ್ತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಉಪೇಕ್ಷೆ ಬೇಡ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ನಾನಾ ರೀತಿಯ ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ.