ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಭವಿಷ್ಯದ ವಿಚಾರದಲ್ಲಿ ಚಿಂತೆಗೊಳಗಾಗುವಿರಿ. ಹಲವು ಅವಕಾಶಗಳು ಎದುರಾದರೂ ಅದನ್ನು ಬಳಸಿಕೊಳ್ಳಬೇಕೋ, ಬೇಡವೋ ಎಂಬ ಗೊಂದಲ ಕಾಡಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಶುಭ ಮಂಗಲ ಕಾರ್ಯಗಳು ಸಾಂಗವಾಗಿ ನೆರವೇರಲಿದೆ.ವೃಷಭ: ಧನಾಗಮನಕ್ಕೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಖರ್ಚು ವೆಚ್ಚಗಳು ಮಿತಿ ಮೀರದಂತೆ ಎಚ್ಚರಿಕೆ ವಹಿಸಬೇಕು. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ.ಮಿಥುನ: ವಾಹನ ಚಾಲನೆಯಲ್ಲಿ ಎಚ್ಚರಿಕೆ