ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ರಂಗದಲ್ಲಿ ಕೊಂಚ ಸಮಾಧಾನಕರ ವಾರ್ತೆ ಕೇಳಿಬರಲಿದೆ. ಬಹುದಿನಗಳಿಂದ ಬಾಕಿ ಬರಬೇಕಿದ್ದ ಹಣ ಪಾವತಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕೆಲಸಕ್ಕೆ ಎದುರಾಗುತ್ತಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದು ಬೇಡ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳಿಗೆ