ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬದಲಾವಣೆಯಾಗುವ ಸಂಭವವಿದೆ. ಮೇಲಧಿಕಾರಿಗಳ ಸಲಹೆ ಸೂಚನೆಗೆ ಕಿವಿಗೊಡಬೇಕಾಗುತ್ತದೆ. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಹಿವಹಿಸಬೇಕಾಗುತ್ತದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯುವುದು. ಯಾವುದೇ ವಿಚಾರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ ಹೆಜ್ಜೆಯಿಡಿ.