ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬಂಧು ಮಿತ್ರರ ಸಹಕಾರದಿಂದ ಕೆಲವು ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಕಾಳಜಿವಹಿಸಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.ವೃಷಭ: ವಾಹನ ಸವಾರರಿಗೆ ಕೊಂಚ ಎಚ್ಚರ ತಪ್ಪಿದರೂ ಅವಘಡ ತಪ್ಪಿದ್ದಲ್ಲ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ