ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮೇಲಧಿಕಾರಿಗಳ ಅಸಹಾಕರ ಅಸಮಾಧಾನವುಂಟು ಮಾಡಲಿದೆ. ಬಾಕಿ ಹಣ ವಸೂಲಾತಿ ಚಿಂತೆ ಕಾಡುವುದು. ವೃತ್ತಿರಂಗದಲ್ಲಿ ಹೊಸ ಬಗೆಯ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.ವೃಷಭ: ಮನಸ್ಸಿಗೆ ಅನಿಸಿದ್ದನ್ನು ಮಾಡುತ್ತಾ ಹೋಗುವುದರಿಂದ ಕುಟುಂಬ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗುವುದು.ಮಿಥುನ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬರಲಿದೆ. ನೀವು