ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಾನಸಿಕ ಒತ್ತಡಗಳು ಕಂಡುಬರಲಿದೆ. ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಗೊಂದಲ ಕಾಡಲಿದೆ. ಸಂಗಾತಿಯ ಸಲಹೆಗಳನ್ನು ಪರಿಗಣಿಸಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.ವೃಷಭ: ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿಟ್ಟುಕೊಳ್ಳುವುದು ಅಗತ್ಯ. ಭವಿಷ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು.ಮಿಥುನ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.