ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿರುದ್ಯೋಗಿಗಳಿಗೆ ನಿರೀಕ್ಷಿಸಿದ ಉದ್ಯೋಗಕ್ಕೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡಂತೆ ನಡೆಯುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ಮೇಲಿನ ಅತಿಯಾದ ನಿರೀಕ್ಷೆಗಳು ನಿಮಗೆ ಭಾರವೆನಿಸೀತು. ನಿಮ್ಮ ಮನಸ್ಸಿಗೆ ಅನಿಸಿದ್ದನ್ನು ಮಾಡುತ್ತಾ ಸಾಗಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶದಿಂದ ಸಂತಸ ಸಿಗುವುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.ಮಿಥುನ: ನಿಮ್ಮ ಕಾರ್ಯಸಾಧನೆಗಾಗಿ ಬಹಳ ಜನರ