ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪರಿಹಾರವಾಗಿದೆ ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಎದುರಾಗಲಿದೆ. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡಬೇಕಾದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ಕೆಳಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಒತ್ತಡ ಎದುರಾಗಲಿದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ಸಮಯ ಕಾಯಬೇಕಾಗುತ್ತದೆ.ಮಿಥುನ: ನೂತನ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳ ಉನ್ನತಿಗೆ