ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮೇಲಧಿಕಾರಿಗಳ ಅಸಡ್ಡೆ ಧೋರಣೆ ನಿಮ್ಮ ತಾಳ್ಮೆಗೆಡಿಸಲಿದೆ. ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ವೃಷಭ: ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ.ಉದ್ಯೋಗ ಕ್ಷೇತ್ರದಲ್ಲಿ ಬಿಡುವಿನ ದಿನದ ಖುಷಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ.