ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ನಿಮ್ಮ ಕಾರ್ಯಭಾರ ಅಧಿಕವಾಗಲಿದೆ. ಗೃಹ ಸಂಬಂಧೀ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವಂತಹ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇವರ ಪ್ರಾರ್ಥನೆ ಮಾಡಿ.ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ