Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಮಂಗಳವಾರ, 12 ಜನವರಿ 2021 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಿಬಂದೀತು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ತಾಳ್ಮೆ, ಸಂಯಮದಿಂದ ವರ್ತಿಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.
 
ವೃಷಭ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾಪಾರಿ ವರ್ಗದವರಿಗೆ ಲಾಭ-ನಷ್ಟ ಸಮನಾಗಿರಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಗೆ ಕಾರಣವಾಗಲಿದೆ. ಸಂಗಾತಿಯೊಂದಿಗೆ ಹೊಮದಾಣಿಕೆ ಅಗತ್ಯ.
 
ಮಿಥುನ: ಕೌಟುಂಬಿಕವಾಗಿ ಸುಖ ಸಂತೋಷ ಸಮೃದ್ಧಿಗೆ ಕೊರತೆಯಿರದು. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ತೀರ್ಥ ಯಾತ್ರೆ ಮಾಡುವ ಯೋಗ ಕೂಡಿಬರಲಿದೆ. ಸರಕಾರಿ ನೌಕರರಿಗೆ ಮುಂಬಡ್ತಿ ಯೋಗವಿದೆ.
 
ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಅಪರಿಚಿತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.
 
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ರಾಜಕೀಯ ರಂಗದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಕನ್ಯಾ: ಮೇಲಧಿಕಾರಿಗಳ ಸಹಕಾರದಿಂದ ಸಲೀಸಾಗಿ ನಿಮ್ಮ ಕೆಲಸಗಳು ನಡೆದುಹೋಗಲಿವೆ. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಅನಿವಾರ್ಯವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರ.
 
ತುಲಾ: ಸ್ವಯಂ ವ್ಯಾಪಾರಿಗಳ ಮುನ್ನಡೆಗೆ ತೊಂದರೆಯಾಗದು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ನೂತನ ಕಾರ್ಯಾರಂಭಕ್ಕೆ ವಿಘ್ನ ಭಯ ತೋರಿಬಂದೀತು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ.
 
ವೃಶ್ಚಿಕ: ಕಲಾ ಕ್ಷೇತ್ರದಲ್ಲಿರರುವವರಿಗೆ ಮುನ್ನಡೆಯ ಯೋಗವಿದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಜನ ಮನ್ನಣೆ ಸಿಗಲಿದೆ. ಕೃಷಿಕರಿಗೆ ವ್ಯವಾಹರದಲ್ಲಿ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕಿರು ಸಂಚಾರ ಮಾಡಬೇಕಾಗುತ್ತದೆ.
 
ಧನು: ಉದ್ಯಮಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಲಿವೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ಮಕರ: ದೂರ ಪ್ರಯಾಣದಿಂದ ದೇಹಾಯಾಸವಾಗಲಿದೆ. ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ನೋಡಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಕುಂಭ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಹಳೆಯ ಮಿತ್ರರ ಭೇಟಿ ಯೋಗ.
 
ಮೀನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಿರಲಿದೆ. ಮನೆಗೆ ಬಂಧು ಮಿತ್ರರ ಆಗಮನ ಸಂತಸ ಹೆಚ್ಚಿಸಲಿದೆ. ಆಪತ್ಕಾಲದಲ್ಲಿ ಮಿತ್ರರ ಸಹಾಯ ಸಿಗಲಿದೆ. ಅನಗತ್ಯ ಚಿಂತೆ ಬೇಡ.
ಇದರಲ್ಲಿ ಇನ್ನಷ್ಟು ಓದಿ :