ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರ ತಪ್ಪಿಗೆ ನೀವು ತಲೆದಂಡ ತೆರಬೇಕಾದ ಪರಿಸ್ಥಿತಿ ಎದುರಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ತಾಳ್ಮೆ, ಸಂಯಮದಿಂದ ವರ್ತಿಸಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ವೃಷಭ: ನಿಮ್ಮ ದೇಹದಲ್ಲಿ ಆಗುವ ಕೆಲವೊಂದು ಬದಲಾವಣೆಗಳು ಚಿಂತೆಗೆ ಕಾರಣವಾದೀತು. ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯ. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.