ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಚಾರಕ್ಕೆ ಅಡ್ಡಿ ಆತಂಕಗಳು ಎದುರಾಗಲಿದ್ದು, ಆರಂಭದಲ್ಲೇ ವಿಘ್ನ ಭಯ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ಕೊಂಚ ಮಟ್ಟಿಗೆ ದೂರವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ.ವೃಷಭ: ವೈಯಕ್ತಿಕ ಜೀವನದಲ್ಲಿ ಉನ್ನತಿ ಕಾಣಲಿದ್ದೀರಿ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಸಂಗಾತಿಗಾಗಿ ಕೆಲವೊಂದು ಹೊಂದಾಣಿಕೆ ಮಾಡಬೇಕಾಗಿಬರಬಹುದು. ಮಹಿಳೆಯರಿಗೆ ತವರಿನ ಕಡೆಯವರ