ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಹಿತಶತ್ರುಗಳಿಂದ ತೊಂದರೆಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಕನಸು ಸದ್ಯದಲ್ಲೇ ನನಸಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ ಮಾಡುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವಿಶೇಷವಾದ ವ್ಯಕ್ತಿಯನ್ನು ಭೇಟಿಯಾಗುವ ಯೋಗವಿದೆ.ಮಿಥುನ: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು