ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಬಹು ದಿನಗಳ ನಂತರ ಇಷ್ಟ ಸ್ಥಳಗಳಿಗೆ ಭೇಟಿ ಕೊಡುವ ಯೋಗ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಭಿವೃದ್ಧಿ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.ಮಿಥುನ: ಗುರುಹಿರಿಯರಿಂದ ಸೂಕ್ತ ಸಮಯದಲ್ಲಿ ಬರುವ ಸಲಹೆಗಳು ಉಪಯೋಗಕ್ಕೆ