ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬಂದರೂ ಮಾನಸಿಕವಾಗಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.ವೃಷಭ: ಆರೋಗ್ಯ ವೃದ್ಧಿಯಾಗಲಿದ್ದು, ಮಾನಸಿಕವಾಗಿ ಹೊಸ ಉಲ್ಲಾಸ ಮೂಡಲಿದೆ. ಆತ್ಮೀಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ವಿದ್ಯಾರ್ಥಿಗಳಿಗೆ ಹೊಸ ವಿಷಯಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ಸರಕಾರಿ ನೌಕರರು ಪಾಲಿಗೆ ಬಂದಿದ್ದು