ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿಸಂಬಂಧವಾಗಿ ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಹಣಕಾಸಿನ ಲೆಕ್ಕಪತ್ರಗಳನ್ನು ಜೋಪಾನವಾಗಿ ಕಾಯ್ದುಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಭದ್ರಪಡಿಸಲು ಅಗತ್ಯ ಕೆಲಸ ಮಾಡಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆ ಕಂಡುಬಂದರೂ ಭವಿಷ್ಯದ ಚಿಂತೆ ಕಾಡೀತು.ಮಿಥುನ: ಅತಿಯಾದ ಬುದ್ಧಿವಂತಿಕೆಯೂ ಕೆಲವೊಮ್ಮೆ ಅನಾಹುತಕ್ಕೆ ಕಾರಣವಾದೀತು. ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸಲಿದ್ದೀರಿ.