ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ನಿಮ್ಮ ಮನಸ್ಸಿನ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ಆರ್ಥಿಕವಾಗಿ ಬರಬೇಕಾಗಿದ್ದ ಹಣ ವಾಪಸಾಗಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಗೆ ನೆರವಾಗಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಪ್ರೀತಿ ಪಾತ್ರರ ಮನಸ್ಸಿನ ದುಃಖಕ್ಕೆ ಸಾಂತ್ವನ ಹೇಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ವಂಚನೆಗೊಳಗಾಗುವ