ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಸಾಂಸಾರಿಕವಾಗಿ ತಾಳ್ಮೆಯೇ ನಿಮ್ಮ ಅಸ್ತ್ರವಾಗಿರಲಿ. ಉದ್ಯೋಗ ಕ್ಷೇತ್ರದಲ್ಲಿ ಉತ್ಸಾಹದಿಂದ ಕೆಲಸ ನಿರ್ವಹಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನ ವೃದ್ಧಿಯಾಗಲಿದ್ದು, ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮ ಕ್ರಿಯಾಶೀಲತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.