ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸದಾಗಿ ವೃತ್ತಿಜೀವನ ಆರಂಭಿಸಿದವರಿಗೆ ಸವಾಲುಗಳು ಎದುರಾಗಲಿವೆ. ಆರ್ಥಿಕವಾಗಿ ಧನ ಗಳಿಕೆಗೆ ಹೊಸ ಮಾರ್ಗಗಳು ಕಂಡುಬರಲಿದೆ. ಕಾರ್ಯನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಬೆಲೆ ಬಾಳುವ ವಸ್ತುಗಳನ್ನು ಜೋಪಾನ ಮಾಡುವ ಹೊಣೆಗಾರಿಕೆ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗುವ ಅನಿವಾರ್ಯತೆ ಎದುರಾಗಲಿದೆ.ಮಿಥುನ: ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.