ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ಉದ್ಯೋಗ ಕಂಡುಕೊಳ್ಳುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಸಂಯಮ ಅಗತ್ಯ.ವೃಷಭ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯಕ್ಕೆ ಬರುವುದು ಉತ್ತಮ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ.