ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿರುದ್ಯೋಗಿಗಳು ತಕ್ಕ ಉದ್ಯೋಗಕ್ಕಾಗಿ ಹುಡುಕಾಟ ನಡೆಸಬೇಕಾಗುತ್ತದೆ. ಸ್ನೇಹಿತರೆನಿಸಿಕೊಂಡಿದ್ದವರಿಂದ ನಿರಾಸೆಯಾಗುವ ಪರಿಸ್ಥಿತಿ ಬಂದೀತು. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.ವೃಷಭ: ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ವಿಶೇಷವಾದ ವ್ಯಕ್ತಿಗಳಿಂದ ನಿಮ್ಮ ಜೀವನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಸಹೋದರಾದಿ ಸಂಬಂಧಿಗಳೊಂದಿಗೆ ಹಳೆಯ ವೈಷಮ್ಯ ಮರೆತು ಸಂತೋಷ ಕಾಣಲಿದ್ದೀರಿ. ಕೌಟುಂಬಿಕವಾಗಿ