ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಜೀವನದಲ್ಲಿ ಹೊಸ ಆರಂಭಕ್ಕೆ ಮುನ್ನುಡಿ ಬರೆಯಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ತವರಿನ